Featured

ಪುತ್ತೂರು : ದ .ಕ. ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ  – Vishwanews24

ಪುತ್ತೂರು : ದ .ಕ. ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ

ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ ಮಾಡಿದ್ದಾರೆ.

ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯ ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದರು, ಇದೀಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾದ‌ ಬಳಿಕ ಫಾಸಿಲ್, ಜಲೀಲ್ ಮತ್ತು ಮಸೂದ್ ಕೊಲೆಯಾಗಿದೆ. ಆದರೆ ಆಗಿನ ಬಿಜೆಪಿ ಸರಕಾರ ಈ ಕುಟುಂಬಗಳಿಗೆ ಪರಿಹಾರ ವಿತರಣೆಯಲ್ಲೂ ತಾರತಮ್ಯ ನಡೆಸಿದೆ.

ಸರಕಾರ ಈ ಮೂರೂ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡಬೇಕು. ಪ್ರತೀ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ನೀಡಬೇಕು. ಮೂರೂ ಕೊಲೆ ಪ್ರಕರಣವನ್ನು NIA ಅಥವಾ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲೂ ಹಲವು ಅನುಮಾನಗಳಿವೆ, ಈ ಪ್ರಕರಣವನ್ನೂ ಮರು ತನಿಖೆ ನಡೆಸಬೇಕು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರ ಕೊಲೆ ಮಾಡಿರುವುದಾಗಿ ವಿ.ಎಚ್.ಪಿ ಮುಖಂಡ ಶರಣ್ ಪಂಪುವೆಲ್ ಸಾರ್ವಜನಿಕವಾಗಿ ಹೇಳಿದ್ದರು. ಅವರ ಮೇಲೆ ಈವರೆಗೂ ಪೋಲೀಸರು ಸುಮೊಟ್ಟೋ ಕೇಸು ದಾಖಲಿಸಿಲ್ಲ, ಸರಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಯುವಜನ ಪರಿಷತ್ ಆಗ್ರಹ ಮಾಡಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

3 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago