ಪುತ್ತೂರು: ದ.ಕ. ಬಿಜೆಪಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಆರ್‌ಎಸ್‌ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ ಪಡೆದಿದ್ದು, ನಿನ್ನೆ ರಾತ್ರಿ ಸಂಸದ ನಳಿನ್ ಕಟೀಲ್, ಎಸ್.ಅಂಗಾರ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಮುಖಂಡರು ಭಾಗಿಯಾಗಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ರಾಮ್ ಭಟ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನಮಾನವಿದೆ. ಅವರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದವರು ಮತ್ತು ಜನರೊಂದಿಗೆ ದಣಿವಿಲ್ಲದೆ ಸೇವೆ ಸಲ್ಲಿಸಿದವರು. ಅವರ ನಿಧನದಿಂದ ದುಖಃವಾಗಿದೆ ಓಂ ಶಾಂತಿ ಎಂದು ಬರೆದುಕೋಂದಿದ್ದಾರೆ.
ಇನ್ನು ರಾಮ್ ಭಟ್ ವಯೋಸಹಜ ಆನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಜನಸಂಘದ ಪ್ರಭಾವಿ ನಾಯಕರಾಗಿ ರಾಮ ಭಟ್ ಗುರಿತಿಸಿಕೊಂಡಿದ್ದರು. ಪಕ್ಷ ಸಂಘಟನೆಯಲ್ಲಿ ಪ್ರಮುಖರಾಗಿದ್ದರು.
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…