ಪುತ್ತೂರು : ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡುತ್ತಿರುವ ಪುತ್ತೂರಿನ ವ್ಯಕ್ತಿಯೊಬ್ಬರು , ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಅದರಲ್ಲಿದ್ದ ವಾಟ್ಸಾಫ್ ಗ್ರೂಪ್ ಗೆ ಸೇರಿ ಅಲ್ಲಿ ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡಿದ್ದಾರೆ.
ಪುತ್ತೂರಿನ ನಿವಾಸಿಯಾಗಿರುವ ವ್ಯಕ್ತಿ ಈ ಹಿಂದೆ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. 15-11-2025 ರಂದು ಫೇಸ್‌ಬುಕ್‌ನಲ್ಲಿ ಹೆಚ್ಚು ಲಾಭಾಂಶದ ಜಾಹೀರಾತು ನೋಡಿ ವಾಟ್ಸಪ್ ಗ್ರೂಪ್‌ಗೆ ಸೇರಿರುತ್ತಾರೆ. ಸದ್ರಿ ಗ್ರೂಪ್ ಹಾಗೂ ವಾಟ್ಸಪ್ ಮೂಲಕ ಅಪರಿಚಿತರು VSL (Ventura Securities Limited) ಹೆಸರಿನ ನಕಲಿ ವೆಬ್‌ಪೇಜ್ ಲಿಂಕ್ ಕಳುಹಿಸಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ. ಅದನ್ನು ನಂಬಿ ಪುತ್ತೂರಿನ ವ್ಯಕ್ತಿ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.51,57,000/- ಹಣ ವರ್ಗಾಯಿಸಿದ್ದಾರೆ. ನಂತರ ವೆಬ್‌ಪೇಜ್‌ನಲ್ಲಿ ಹೆಚ್ಚಿನ ಬ್ಯಾಲೆನ್ಸ್ ತೋರಿಸಿದರೂ ಹಣ ವಾಪಸ್ ಪಡೆಯಲು ಸಾಧ್ಯವಾಗಿಲ್ಲ. ನಂತರ ಅದು ನಕಲಿ ವೆಬ್‌ಪೇಜ್ ಎಂದು ತಿಳಿದುಬಂದಿದೆ. ಈ ಬಗ್ಗೆ ಸಿ ಇ ಎನ್ ಠಾಣಾ CR: 02/2026 U/S 66(D) IT ACT & 318(4),319(2) BNS ACT ಯಂತೆ ಪ್ರಕರಣ ದಾಖಲಾಗಿರುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…