Featured

ಪುತ್ತೂರು : ನಕಲಿ ಷೇರುಮಾರುಕಟ್ಟೆಯಲ್ಲಿ ಹೂಡಿಕೆ ; 51 ಲಕ್ಷ ಕಳೆದುಕೊಂಡ  ವ್ಯಕ್ತಿ – vishwanews24

ಪುತ್ತೂರು : ನಕಲಿ ಷೇರುಮಾರುಕಟ್ಟೆಯಲ್ಲಿ ಹೂಡಿಕೆ ; 51 ಲಕ್ಷ ಕಳೆದುಕೊಂಡ  ವ್ಯಕ್ತಿ

ಪುತ್ತೂರು : ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡುತ್ತಿರುವ ಪುತ್ತೂರಿನ ವ್ಯಕ್ತಿಯೊಬ್ಬರು , ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಅದರಲ್ಲಿದ್ದ ವಾಟ್ಸಾಫ್ ಗ್ರೂಪ್ ಗೆ ಸೇರಿ ಅಲ್ಲಿ ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡಿದ್ದಾರೆ.

ಪುತ್ತೂರಿನ ನಿವಾಸಿಯಾಗಿರುವ ವ್ಯಕ್ತಿ ಈ ಹಿಂದೆ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. 15-11-2025 ರಂದು ಫೇಸ್‌ಬುಕ್‌ನಲ್ಲಿ ಹೆಚ್ಚು ಲಾಭಾಂಶದ ಜಾಹೀರಾತು ನೋಡಿ ವಾಟ್ಸಪ್ ಗ್ರೂಪ್‌ಗೆ ಸೇರಿರುತ್ತಾರೆ. ಸದ್ರಿ ಗ್ರೂಪ್ ಹಾಗೂ ವಾಟ್ಸಪ್ ಮೂಲಕ ಅಪರಿಚಿತರು VSL (Ventura Securities Limited) ಹೆಸರಿನ ನಕಲಿ ವೆಬ್‌ಪೇಜ್ ಲಿಂಕ್ ಕಳುಹಿಸಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ. ಅದನ್ನು ನಂಬಿ ಪುತ್ತೂರಿನ ವ್ಯಕ್ತಿ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.51,57,000/- ಹಣ ವರ್ಗಾಯಿಸಿದ್ದಾರೆ. ನಂತರ ವೆಬ್‌ಪೇಜ್‌ನಲ್ಲಿ ಹೆಚ್ಚಿನ ಬ್ಯಾಲೆನ್ಸ್ ತೋರಿಸಿದರೂ ಹಣ ವಾಪಸ್ ಪಡೆಯಲು ಸಾಧ್ಯವಾಗಿಲ್ಲ. ನಂತರ ಅದು ನಕಲಿ ವೆಬ್‌ಪೇಜ್ ಎಂದು ತಿಳಿದುಬಂದಿದೆ. ಈ ಬಗ್ಗೆ ಸಿ ಇ ಎನ್‌ ಠಾಣಾ CR: 02/2026 U/S 66(D) IT ACT & 318(4),319(2) BNS ACT ಯಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

17 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

20 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

20 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

20 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

21 hours ago