Featured

ಪುತ್ತೂರು :  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..! Vishwanews24

ಪುತ್ತೂರು :  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬುಧವಾರ ನಡೆದ ಬೃಹತ್ ಸಭೆಯಲ್ಲಿ ತೀವ್ರ ಒತ್ತಾಯ ಅಭಿಮಾನಿ, ಹಿಂದೂ ಕಾರ್ಯಕರ್ತರಿಂದ ಬಂದಿತ್ತು.

ಪುತ್ತಿಲರವರು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಎರಡು ದಿನದಲ್ಲಿ ತಮ್ಮ ಸ್ಪಷ್ಟ ನಿಲುವುವನ್ನು ತಿಳಿಸುತ್ತೇನೆ ಎಂದಿದ್ದರು. ಇದೀಗ ಪುತ್ತಿಲರವರು ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಿಂದ ಕಣಕ್ಕಿಳಿಯಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದು, ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಪುತ್ತೂರಿನಲ್ಲಿ ಅರುಣ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು.

ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವ ನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರ ಪರವಾಗಿ ಕಾರ್ಯ ನಿರ್ವಹಿಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago