ಪುತ್ತೂರು : ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯ ಪದವು ಕಡೆಗೆ ಸಂಜೆ ಬರುತ್ತಿದ್ದ ಸರಕಾರಿ ಬಸ್ ಗೆ ಹತ್ತಲೆತ್ನಿಸಿದ ಪಾನ ಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ ಮೆಟ್ಟಿಲಲ್ಲೇ ತಡೆದು ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ಒದ್ದು ಹಾಕಿದ ಘಟನೆ ಸೆ.೦7 ರ ಬುಧವಾರ ಸಂಜೆ ಈಶ್ವರ ಮಂಗಲ ಪೇಟೆಯಲ್ಲಿ ನಡೆದಿದೆ.
ಸಂಜೆ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬವರು ಪದಡ್ಕ ಹೋಗಲು ಬಸ್ಸನ್ನು ಹತ್ತಿದ್ದು, ಮದ್ಯಪಾನ ಮಾಡಿರುವುದನ್ನು ಗಮನಿಸಿದ ನಿರ್ವಾಹಕ ಸುಖ್ ರಾಜ್ ರೈ , ಪ್ರಯಾಣಿಕ ಕೃಷ್ಣಪ್ಪ ರವರನ್ನು ಕೈಯಿಂದ ದೂಡಿ ಕೈಯಲ್ಲಿದ್ದ ಕೊಡೆ ಮತ್ತಿತರ ವಸ್ತುಗಳನ್ನು ಕಸಿದು ಹೊರಕ್ಕೆ ಎಸೆದಿದ್ದಾನೆ. ಬಳಿಕ ಕಪಾಳಕ್ಕೆ ಬಾರಿಸಿ , ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ. ಹೊರಳಾಡುತ್ತಾ ಬಿದ್ದಿರುವ ಕೃಷ್ಣಪ್ಪರನ್ನು ನಿರ್ವಾಹಕ ಹಾಗೆ ಬಿಟ್ಟು ತೆರಳಿದ ತೆರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು – Vishwanews24
ಈ ವಿಷಯ ತಿಳಿದ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ ಸರಕಾರಿ ಬಸ್ ನ ಪುತ್ತೂರು ಘಟಕವನ್ನು ಸಂಪರ್ಕಿಸಿ ಬಸ್ಸು ನಿರ್ವಾಹಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದ್ದು ಕೃತ್ಯಕ್ಕೆ ಕಾರಣರಾದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವೈರಲ್ ಆದ ವಿಡಿಯೋ ಗಮನಿಸಿ, ಪ್ರಯಾಣಿಕರ ಮೇಲೆ ಕೈ ಮಾಡುವ ತುಳಿಯುವ ಅಧಿಕಾರ ನಿರ್ವಾಹಕರಿಗಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿ ನಿರ್ವಾಹಕನನ್ನು ಅಮಾನತು ಮಾಡುತ್ತಿದ್ದೇವೆ. ಇದು ಅಕ್ಷಮ್ಯವಾಗಿದ್ದು ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಕೆ ಎಸ್ ಆರ್ ಟಿಸಿ ಪುತ್ತೂರು ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಉಡುಪಿ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…