ಪುತ್ತೂರು: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ನಾಪತ್ತೆಯಾದ ಯುವತಿ.
ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದಳು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನೆಗೂ ಹೋಗದೆ ಸಂಬಂಧಿಕರಲ್ಲಿಗೂ ಹೋಗದೆ, ಸ್ನೇಹಿತರಲ್ಲಿಗೂ ತೆರಳದೆ ನಾಪತ್ತೆಯಾಗಿರುವುದಾಗಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಆಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಕೂಡಲೇ 6361807956 / 8971783524 ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ತಿಳಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…