Featured

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿ : ಸ್ಕ್ಯಾನಿಂಗ್‌ ಫೋಟೋಗಳು ವೈರಲ್‌ – Vishwanews24

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿ : ಸ್ಕ್ಯಾನಿಂಗ್‌ ಫೋಟೋಗಳು ವೈರಲ್‌

ಪುತ್ತೂರು: ಬ್ಯಾನರ್ ಹಾಕಿದ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯ ನೆಪದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿವೆ. ವರದಿಗಳು ವೈರಲ್‌ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣ ಪುತ್ತೂರು ಬಸ್ಸು ನಿಲ್ದಾಣದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದರು ಎಂದು ವ್ಯಾಪಕ ಪ್ರಚಾರ ಪಡೆದುಕೊಂಡ ಪ್ರಕರಣ, ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ಡಿವೈಎಸ್ಪಿ ಗೆ ಒತ್ತಡ ಹಾಕಿಸಿ ಬಿಜೆಪಿಯ ಕಾರ್ಯಕರ್ತರ ಮೇಲೆಯೇ ಡಿವೈಎಸ್ಪಿ ಕಚೇರಿಯಲ್ಲೇ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತು. ಮೇ.15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ತೆರಳಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಬಿಡುಗಡೆಗೊಳಿಸಿಕೊಂಡು ಬಂದಿದ್ದರು. ಯುವಕರ ಬಳಿ ಮುಚ್ಚಳಿಕೆ ಬರೆಸಿಕೊಂಡು ಪೊಲೀಸರು ಮಧ್ಯರಾತ್ರಿ ಬಿಟ್ಟು ಕಳುಹಿಸಿದ್ದರು. ಎರಡು ದಿನಗಳ ಬಳಿಕ ಯುವಕರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮತ್ತೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್‌ ಇಲಾಖೆಯು , ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಎಸ್ಐ , ಪುತ್ತೂರಿನ ಪೊಲೀಸ್ ಕಾನ್ಸ್ಟೆಬಲ್ ರ ಮೇಲೆ ಪ್ರಕರಣ ದಾಖಲು ನಡೆಸಿ, ಎಸ್ಐ ಮತ್ತು ಪಿಸಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಿದ್ದರು.

ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿ ಬಂದಿತ್ತು ಎನ್ನಲಾಗಿದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಕಾರತ್ಮಕ ಸ್ಪಂದನೆ ಸಿಗದಿದ್ದರೇ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago