ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುತ್ತೇವೆ ಎಂದು ಹೇಳಿದ್ದು, ಇದೀಗ ಅವಕಾಶ ಇಲ್ಲದ ನಿಟ್ಟಿನಲ್ಲಿಇದೇ ಹಣದಿಂದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ದಕ್ಷಿಣ ಕನ್ನಡ, ಉಡುಪಿ ವಿಧಾನಸಭೆ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಲ್ಲವ ಸಮಾಜದ ಮುಖಂಡ ಜಯಂತ ನಡುಬೈಲು ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಅವರ ಶ್ರದ್ಧಾಂಜಲಿ ಸಭೆಯಲ್ಲಿಅವರ ಕುಟುಂಬದವರಿಗೆ ಮನೆ ನಿರ್ಮಿಸುವ ಭರವಸೆ ನೀಡಲಾಗಿತ್ತು. ಅಲ್ಲದೆ ಮನೆಯ 3ಡಿ ವಿನ್ಯಾಸದ ಜತೆ ಮನೆ ನಿರ್ಮಾಣಕ್ಕೆ ಏಳು ಲಕ್ಷ ರೂ. ಮುಂಗಡ ಹಣವನ್ನು ಪ್ರವೀಣ್ ನೆಟ್ಟಾರು ಅವರ ಕುಟುಂಬದವರ ಮೂಲಕ ಗುತ್ತಿಗೆದಾರರಿಗೆ ನೀಡಲಾಗಿತ್ತು.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಇದಕ್ಕೆ ಭೂಮಿಪೂಜೆಯೂ ನಡೆದಿದೆ. ಈ ವಿಚಾರ ಸ್ವಾಗತಾರ್ಹವಾಗಿದ್ದು, ಈ ವಿಚಾರವನ್ನು ಸಂಸದರು ಬಿಲ್ಲವ ಮುಖಂಡರ ಜತೆ ಚರ್ಚಿಸಿ ಈ ವಿಚಾರಕ್ಕೆ ಇಳಿಯಬೇಕಿತ್ತು ಎಂಬುದು ಬಿಲ್ಲವ ಮುಖಂಡರಿಂಂದ ಅಭಿಪ್ರಾಯ ವ್ಯಕ್ತವಾಗಿದೆ.
ಈ ಕುರಿತು ನಮ್ಮ ಯಾವುದೇ ವಿರೋಧವಿಲ್ಲ. ಅದಾದ ಬಳಿಕ ಗುತ್ತಿಗೆದಾರರಿಗೆ ನೀಡಿದ ಏಳು ಲಕ್ಷವನ್ನು ನಾವು ಹಿಂಪಡೆದಿದ್ದೇವೆ ಎಂದು ತಿಳಿಸಿದರು.
ಇದೀಗ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಿಸಲು ಬಳಸುವ 45 ಲಕ್ಷ ರೂ.ನಲ್ಲಿ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ14 ಮನೆ ನಿರ್ಮಿಸಿ ಕೊಡುವ ಯೋಜನೆಯಿದೆ. ಇದೀಗ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಣಚ ಗ್ರಾಮದ ನಿವಾಸಿ ಚಂದ್ರಾವತಿ ಹಾಗೂ ಬಂಟ್ವಾಳ ಸಜಿಪಮೂಡ ನಿವಾಸಿ ಸುಂದರಿ ಅವ ಕುಟುಂಬಕ್ಕೆ ಮೊದಲ ಹಂತದಲ್ಲಿ ಮನೆ ನಿರ್ಮಾಣವಾಗಲಿದ್ದು, ಕಾಮಗಾರಿಯನ್ನು ಮುಂದಿನ ವಾರದಲ್ಲಿ ಹಮ್ಮಿಕೊಳ್ಳಲಾಗುವುದು.
ಉಳಿದ 12 ಮನೆಗಳನ್ನು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.
ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ ಸಲ್ಲಿಕೆ – Vishwanews24
ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರಾದ ಉಲ್ಲಾಸ್ ಕೋಟ್ಯಾನ್, ಅವಿನಾಶ್ ಸುವರ್ಣ ಮಂಗಳೂರು, ಮೋಹನ್‌ದಾಸ್ ಬಂಗೇರ, ಕಿಶನ್ ಅಮಿನ್ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…