ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು ಈಗಾಗಲೇ ಸುಳ್ಯ ನಿವಾಸಿ ಶಿಹಾಬ್, ಪಾಲ್ತಾಡಿ ಅಂಕತ್ತಡ್ಕದ ರಿಯಾಝ್, ಸುಳ್ಯ ಎಲಿಮಲೆಯ ಬಶೀರ್, ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಪಳ್ಳಮಜಲು ನಿವಾಸಿಗಳಾದ ಸದ್ದಾಂ, ಹ್ಯಾರಿಸ್, ಬೆಳ್ಳಾರೆ ಗೌರಿಹೊಳೆಯ ನೌಫಲ್, ನಾವೂರಿನ ಆಬಿದ್, ಜಟ್ಟಿಪಳ್ಳದ ಕಬೀರ್, ಬೆಳ್ಳಾರೆ ಕುನ್ನಾಗುಡ್ಡೆ ನಿವಾಸಿ ಬೆಳ್ಳಾರೆ ಗ್ರಾ.ಪಂ. ಸದಸ್ಯ ಕೆ.ಮಹಮ್ಮದ್ ಇಕ್ಬಾಲ್, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಇಸ್ಮಾಯಿಲ್ ಶಾಫಿ ಬೆಳ್ಳಾರೆ ಮತ್ತು ನಾವೂರು ಗಾಂಧಿನಗರ ನಿವಾಸಿ ಇಬ್ರಾಹಿಂ ಶಾ ಎಂಬವರನ್ನು ಬಂಧಿಸಿದ್ದಾರೆ.
ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ, ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..
ಇನ್ನು ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್‌ಐ ಹೊಂದಿದ್ದು, ಕೆಲವೇ ದಿನಗಳಲ್ಲಿ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತನಾಗಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ ಮತ್ತು ಪಿಎಫ್‌ಐ ಮುಖಂಡ ಜಾಬೀರ್ ಅರಿಯಡ್ಕರವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಸುಳ್ಯ ತಾಲೂಕು ಬೆಳ್ಳಾರೆ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ.ಎಚ್., ಸುಳ್ಯ ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧೀಕ್ ಯಾನೆ ಪೈಂಟರ್ ಸಿದ್ಧೀಕ್ ಪತ್ತೆಗೆ ಲುಕೌಟ್ ನೊಟೀಸ್ ಹೊರಡಿಸಿರುವ ಎನ್‌ಐಎ ಅಧಿಕಾರಿಗಳು ಈ ನಾಲ್ವರ ಪತ್ತೆಗೆ ವಿವಿದೆಡೆ ಬಲೆ ಬೀಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…