Featured

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು – ಮಸೂದ್ ಹತ್ಯೆಗೆ ಪ್ರತೀಕಾರ  – Vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು –

ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು ಈಗಾಗಲೇ ಸುಳ್ಯ ನಿವಾಸಿ ಶಿಹಾಬ್, ಪಾಲ್ತಾಡಿ ಅಂಕತ್ತಡ್ಕದ ರಿಯಾಝ್, ಸುಳ್ಯ ಎಲಿಮಲೆಯ ಬಶೀರ್, ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಪಳ್ಳಮಜಲು ನಿವಾಸಿಗಳಾದ ಸದ್ದಾಂ, ಹ್ಯಾರಿಸ್, ಬೆಳ್ಳಾರೆ ಗೌರಿಹೊಳೆಯ ನೌಫಲ್, ನಾವೂರಿನ ಆಬಿದ್, ಜಟ್ಟಿಪಳ್ಳದ ಕಬೀರ್, ಬೆಳ್ಳಾರೆ ಕುನ್ನಾಗುಡ್ಡೆ ನಿವಾಸಿ ಬೆಳ್ಳಾರೆ ಗ್ರಾ.ಪಂ. ಸದಸ್ಯ ಕೆ.ಮಹಮ್ಮದ್ ಇಕ್ಬಾಲ್, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಇಸ್ಮಾಯಿಲ್ ಶಾಫಿ ಬೆಳ್ಳಾರೆ ಮತ್ತು ನಾವೂರು ಗಾಂಧಿನಗರ ನಿವಾಸಿ ಇಬ್ರಾಹಿಂ ಶಾ ಎಂಬವರನ್ನು ಬಂಧಿಸಿದ್ದಾರೆ.

ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ, ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..

ಇನ್ನು ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್‌ಐ ಹೊಂದಿದ್ದು, ಕೆಲವೇ ದಿನಗಳಲ್ಲಿ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತನಾಗಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ ಮತ್ತು ಪಿಎಫ್‌ಐ ಮುಖಂಡ ಜಾಬೀರ್ ಅರಿಯಡ್ಕರವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಸುಳ್ಯ ತಾಲೂಕು ಬೆಳ್ಳಾರೆ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ.ಎಚ್., ಸುಳ್ಯ ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧೀಕ್ ಯಾನೆ ಪೈಂಟರ್ ಸಿದ್ಧೀಕ್ ಪತ್ತೆಗೆ ಲುಕೌಟ್ ನೊಟೀಸ್ ಹೊರಡಿಸಿರುವ ಎನ್‌ಐಎ ಅಧಿಕಾರಿಗಳು ಈ ನಾಲ್ವರ ಪತ್ತೆಗೆ ವಿವಿದೆಡೆ ಬಲೆ ಬೀಸಿದ್ದಾರೆ.

BREAKING NEWS – ಮೂಳೂರು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಡೈವರ್ಶನ್ನಲ್ಲಿ ಭೀಕರ ಅಪಘಾತ : ಬೈಕ್ ಸವಾರ ಗಂಭೀರ – Vishwanews24 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago