Featured

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಶರಣಾಗದಿದ್ದಲ್ಲಿಆಸ್ತಿ ಮುಟ್ಟುಗೋಲು – Vishwanews24

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಶರಣಾಗದಿದ್ದಲ್ಲಿ ಮನೆ ಜಪ್ತಿಯ ಎಚ್ಚರಿಕೆ

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ದ ಇದೀಗ ರಾಷ್ಟ್ರೀಯ ತನಿಖಾದಳ ತನ್ನ ಹೊಸ ಅಸ್ತ್ರ ಪ್ರಯೋಗಿಸಿದ್ದು, ಆರೋಪಿಗಳು ಎರಡು ದಿನದಲ್ಲಿ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮುಂದಾಗಿದ್ದಾರೆ.

ಇಂದು ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂನ್ 30ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯದ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆಯೂ ಬೆಳ್ಳಾರೆಯಲ್ಲಿ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಘೋಷಿಸಿ ಆರೋಪಿ ಮುಸ್ತಫ ಎಂಬಾತನ ಮನೆಗೂ ಆದೇಶ ಪ್ರತಿ ಅಂಟಿಸಲಾಗಿದೆ.

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. NIA ನ್ಯಾಯಾಲಯದ ಅಧಿಕಾರಿಗಳು ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನುಅಂಟಿಸಿದ್ದು ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago