ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ.
ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿದ್ದಾರೆ. ಅವರ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಜೊತೆಗೆ ಸಿದ್ದಿಕ್ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು, ಅಲ್ಲಿಗೂ ತೆರಳಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದ ಎನ್‌ಐಎ ಪೊಲೀಸರು ಕೆಯ್ಯೂರಿಗೆ ಆಗಮಿಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಯಾಗಿದ್ದ ಪ್ರವೀಣ್ ನೆಟ್ಟಾರ್ ಅವರನ್ನು 2022ರ ಜು.26 ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರವೀಣ್ ಅವರ ಹತ್ಯೆ ನಡೆದ ವೇಳೆ ಅಬೂಬಕ್ಕರ್ ಸಿದ್ದಿಕ್ ಅವರು ಸ್ಥಳದಲ್ಲೇ ಇದ್ದು ಆರೋಪಿಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು ಸದ್ಯ ತಲೆ ಮರೆಸಿಕೊಂಡಿರುತ್ತಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…