Featured

ಪುತ್ತೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ 11 ಲಕ್ಷ ರೂ. ನೆರವು – Vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ 11 ಲಕ್ಷ ರೂ. ನೆರವು

ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂ. ನೆರವು ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಇತ್ತೀಚೆಗಷ್ಟೇ ಅವರು ಟ್ವೀಟರ್‌ನಲ್ಲಿ ಕೇಳಿದ್ದರು. ಆ ಬಳಿಕ 11 ಲಕ್ಷ ರೂ.ಗಳನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಮನೀಶ್ ಮುಂದ್ರಾ ಅವರು ಅಂಖೋನ್ ದೇಖಿ, ಮಸಾನ್, ಕದ್ವಿ ಹವಾ ಸೇರಿದಂತೆ ವಿವಿಧ ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 2017ರಲ್ಲಿ ಅವರ ನಿರ್ಮಾಣದ ಧನಕ್ ಅತ್ಯುತ್ತಮ ಮಕ್ಕಳ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. ಅಲ್ಲದೆ, ನ್ಯೂಟನ್ ಚಿತ್ರ ಆಸ್ಕರ್‍ ಪ್ರಶಸ್ತಿಗೆ ಪ್ರವೇಶ ಪಡೆದಿತ್ತು. ಅಸಹಾಯಕರಿಗೆ ನೆರವಾಗುವ ಕೆಲಸದಲ್ಲಿಯೂ ತೊಡಗಿಸಿಕೊಂಡಿರುವ ಮುಂದ್ರಾ, ಕೊರೊನಾ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಿಗೆ ಪಿಪಿಇ ಕಿಟ್‌ಗಳನ್ನು ಒದಗಿಸಿಕೊಟ್ಟಿದ್ದರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago