ಪುತ್ತೂರು: ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು , ಸುಳ್ಯ , ಬೆಳ್ಳಾರೆ ಸಹಿತ ಬಸ್ ನಿಲ್ದಾಣ , ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ. ಅಲ್ಲದೆ ನಾಲ್ವರ ಪತ್ತೆಗೆ ಎನ್ಐಎ ಶೋಧ ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರಿನ ಹಲವೆಡೆ ಕಾರ್ಯಾಚರಣೆ ನಡೆಸಿದ್ದಾರೆ
ಸುಳ್ಯ ತಾಲೂಕು ಬೆಳ್ಳಾರೆಯ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ. ಎಚ್., ಸುಳ್ಯ ತಾಲೂಕು ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್‌ರವರ ಪತ್ತೆಗೆ ನೊಟೀಸ್ ಜಾರಿ ಮಾಡಲಾಗಿದೆ. ಮಹಮ್ಮದ್ ಮುಸ್ತಫಾ ಹಾಗೂ ತುಫೈಲ್ ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದು ಉಳಿದಿಬ್ಬರ ಪತ್ತೆಗೆ ತಲಾ 2 ಲಕ್ಷ ರೂ. ಬಹುಮಾನ ಪ್ರಕಟಿಸಲಾಗಿದೆ. ಎನ್‌ಐಎ ಕಚೇರಿಯ ಬೆಂಗಳೂರು ಘಟಕದ ಪೊಲೀಸ್ ಅಧೀಕ್ಷಕರ ಕಚೇರಿಗೆ 080-29510900 ಮಾಹಿತಿ ನೀಡಬಹುದು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…