ಪುತ್ತೂರು: ಪ್ರೀತಿಯ ನಾಟಕವಾಡಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಪುತ್ತೂರಿನ ನಿತೇಶ್ ರೈ ಎಂಬಾತನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.
ನಿತೇಶ್ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಅಲ್ಲಿನ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರೊಂದಿಗೆ ಸಲುಗೆ ಬೆಳೆಸಿಕೊಂಡು ಬಳಿಕ ಪ್ರೀತಿಸುತ್ತೇನೆ ಎಂದು ನಾಟಕವಾಡಿ ಅವರನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಸಿಕ್ಕಸಿಕ್ಕಲ್ಲಿ ಅಮಾಯಕ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರನ್ನ ತನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಈತನ ವಿರುದ್ದ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
ನಿತೇಶ್ ಅಪ್ರಾಪ್ತ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು, ಆಕೆಯ ಬಳಿ ಪ್ರೀತಿಸುತ್ತಿದ್ದೇನೆ ಎಂದು ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿ, ನಂತರ ನಿರಂತರವಾಗಿ ಅಕೆಯ ಫೋಟೋಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ. ಅಲ್ಲದೆ ಈತನ ಸ್ನೇಹಿತರಿಗೂ ಆಕೆಯ ನಂಬರ್ ನೀಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದ. ಇದನ್ನು ತಿಳಿದ ಹುಡುಗಿಯ ಪೋಷಕರು ಹಾಗೂ ಸ್ಥಳೀಯರು ಸೇರಿ ಈತನನ್ನ ಹೆಡೆಮುರಿಕಟ್ಟಿ ಧರ್ಮದೇಟು ನೀಡಿದ್ದರು.
ಇದೀಗ ನಿತೇಶ್ ರೈ ವಿರುದ್ಧ ಸಂಪ್ಯ ಠಾಣೆಯಲ್ಲಿ ಇಬ್ಬರು ಯುವತಿಯರು ದೂರನ್ನು ನೀಡಿದ್ದು, ಫೋಕ್ಸೋ, ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಸದ್ಯ ಈತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…