Featured

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ – vishwanews24

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಮುಸ್ಸಂಜೆ ಪುತ್ತೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಯನ್ನು ಮಂಗಳೂರಿನ ತೌಹೀದ್‌ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ಸು ಸಂಜೆ ಸುಮಾರು 6:30 ಗಂಟೆಗೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿ ತಂದೆಗೆ ಪೋನ್‌ ಮುಖಾಂತರ ತಿಳಿಸಿದ್ದಾಳೆ. ಬಸ್‌ ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ತಲುಪಿದಾಗ ಆರೋಪಿಯು ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದಾಗ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 56/2025 ಕಲಂ: 75 BNS 2023 ರಂತೆ ಪ್ರಕರಣ ದಾಖಾಲಿಸಿಕೊಂಡು ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago