Featured

ಪುತ್ತೂರು: ಬಸ್-ಕಾರು ಅಪಘಾತದಲ್ಲಿ ಪುತ್ರಿ ಮೃತಪಟ್ಟ ಒಂದು ತಿಂಗಳೊಳಗೆ ತಂದೆಯೂ ಸಾವು – vishwanews24

ಪುತ್ತೂರು: ಬಸ್-ಕಾರು ಅಪಘಾತದಲ್ಲಿ ಪುತ್ರಿ ಮೃತಪಟ್ಟ ಒಂದು ತಿಂಗಳೊಳಗೆ ತಂದೆಯೂ ಸಾವು

ಪುತ್ತೂರು : ನಾಲ್ಕು ತಿಂಗಳ ಹಿಂದೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಒಂದು ತಿಂಗಳೊಳಗೆ ಗಾಯಾಳು ತಂದೆಯೂ ನ.3ರಂದು ಸಾವನ್ನಪ್ಪಿದ್ದಾರೆ.

ಮೇ 27 ರಂದು ಖಾಸಗಿ ಬಸ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಅಂಡೆಪುಣಿ ಈಶ್ವರ ಭಟ್ ಅವರ ಮಗಳು ಅಪೂರ್ವಾ (35) ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಕ್ಟೋಬರ್ 7 ರಂದು ನಿಧನರಾಗಿದ್ದರು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಅವರ ತಂದೆ, ಈಶ್ವರ ಭಟ್ (75), ಅವರು ಕೂಡ ನವೆಂಬರ್ 3 ರಂದು ಪುತ್ತೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸಿದ ದಿನ, ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಅವರು ಪುತ್ತೂರು ಪಟ್ಟಣದಿಂದ ತಮ್ಮ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮುರ ಸಮೀಪ ಅವರ ಕಾರಿಗೆ ಢಿಕ್ಕಿ ಹೊಡೆದಿತ್ತು. ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡರೆ, ಅಪೂರ್ವಾ ಅವರ 3 ವರ್ಷದ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಳು. ತಂದೆ ಮತ್ತು ಮಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡಿದ್ದ ಈಶ್ವರ ಭಟ್ ಅವರನ್ನು ಪುತ್ತೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಅಪೂರ್ವಾ ಅವರು ಈ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

51 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago