ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೊಗೇರ ಸಂಘದ ರಾಜ್ಯಾಧ್ಯಕ್ಷ ವಿಶ್ವನಾಥ ಅವರು ಎಚ್ಚರಿಸಿದ್ದಾರೆ.
ಅವರು ಗುರುವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿ ಈತನಕ ಯಾವುದೇ ಸ್ಪಂಧನೆ ದೊರಕಿಲ್ಲ. ಇಲ್ಲಿನ ಶಾಸಕರು, ಮಹಿಳಾ ಕಲ್ಯಾಣ ಇಲಾಖೆಗಳು, ಸ್ಥಳೀಯ ಪಂಚಾಯತ್‍ಗಳು ಕೂಡಾ ಈ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಅಲ್ಲದೆ ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷಗಳು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಯಾಗಿರುವ ನಾರಾಯಣ ರೈ ಎಂಬಾತ ಆರೆಸೆಸ್ಸ್ ಹಾಗೂ ಬಿಜೆಪಿ ಮುಖಂಡರಾಗಿರುವ ಕಾರಣ ಪ್ರಕರಣವನ್ನು ತಿರುಚಿ ಸಂತ್ರಸ್ತ ಬಾಲಕಿಯ ಸಹೋದರನನ್ನೇ ಆರೋಪಿ ಎಂದು ಬಿಂಬಿಸಿ ಬಂಧಿಸಲಾಗಿದೆ.
ಆರೆಸೆಸ್ಸ್ ಮತ್ತು ಬಿಜೆಪಿಗೆ ನೈಜ ಜನಪರವಾದ ಕಾಳಜಿಯಿದ್ದಲ್ಲಿ ತಕ್ಷಣವೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸಂತ್ರಸ್ತೆಯ ಜಾತಿಯನ್ನು ನೋಡದೆ ಆಕೆಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಮಿತ್ತಬೈಲು ಮಾತನಾಡಿ ಈ ಪ್ರಕರಣವು ಅತ್ಯಂತ ನಾಚಿಗೆಗೇಡಿನ ವಿಚಾರವಾಗಿದ್ದು, ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಕೋಮು ವಿಚಾರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸುತ್ತಿರುವ ಪರಿವಾರ ಸಂಘಟನೆಗಳು ಈ ವಿಚಾರದಲ್ಲಿ ಮಾತ್ರ ಚಕಾರವೆತ್ತಿಲ್ಲ. ದಲಿತರನ್ನು ಓಟು ಬ್ಯಾಂಕ್‍ಗಳಾಗಿ ಕಾಣುತ್ತಿರುವವರು ಅವರ ನೋವಿಗೆ ಸ್ಪಂಧನೆ ನೀಡುತ್ತಿಲ್ಲ. ಈ ಪ್ರಕರಣದಲ್ಲಿ ನೈಜ ಆರೋಪಿಯನ್ನು ತಕ್ಷಣವೇ ಬಂಧಿಸಬೇಕು. ವಾರದ ಒಳಗಾಗಿ ಆರೋಪಿಯ ಬಂಧನವಾಗದಿ ದ್ದಲ್ಲಿ ಡಿವೈಎಸ್‍ಪಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಕೋಟ್ಯಾನ್, ಜಯಪ್ರಕಾಶ್ ಕನ್ಯಾಡಿ, ಅಶೋಕ್ ಕೊಂಚಾಡಿ, ಸೀತಾರಾಮ ಕೊಂಚಾಡಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…