Featured

ಪುತ್ತೂರು: ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ :- ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ; ಆರೋಪ – Vishwanews24

ಪುತ್ತೂರು: ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ:- ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ – ಆರೋಪ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ ಪೋಟೋ ಬಳಸಿ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 9 ಮಂದಿ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಠಾಣೆಯಲ್ಲಿ ಕೂಡಿ ಹಾಕಿ ತೀವ್ರವಾಗಿ ಥಳಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕರ ಹಾಗೂ ಕೆಲವು ಪ್ರಭಾವಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಾಗೂ ನಗರಸಭೆ ನೀಡಿದ ದೂರಿನ್ವಯ ನರಿಮೊಗರು ಗ್ರಾಮದ ನಿವಾಸಿಗಳಾಗಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಪೊಲೀಸರ ಕಿರುಕುಳ ತಿಳಿದು ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಡಿಸಿದ್ದಾರೆ ಎನ್ನಲಾಗಿದೆ.

ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಂಧಿತರು ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು , ಈ ಪೈಕಿ ಕೆಲವರು ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತ ಎನ್ನಲಾಗಿದೆ. ಫೋಟೊದಲ್ಲಿ ಕಾಲು, ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಾಣುತ್ತಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

5 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

5 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

6 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

6 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago