Featured

ಪುತ್ತೂರು  : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯ ಕಾಂಗ್ರೆಸ್ ಕಾರ್ಯಕರ್ತರು ಮಾಡುವುದಿಲ್ಲ: ಅಶೋಕ್‌ ಕುಮಾರ್ ರೈ – Vishwanews24

ಪುತ್ತೂರು  : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯ ಕಾಂಗ್ರೆಸ್ ಕಾರ್ಯಕರ್ತರು ಮಾಡುವುದಿಲ್ಲ: ಅಶೋಕ್‌ ಕುಮಾರ್ ರೈ

ಪುತ್ತೂರು : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯವನ್ನು ಕಾಂಗ್ರೇಸ್ ಕಾರ್ಯಕರ್ತರು ಮಾಡುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ನೂತನ ಶಾಸಕ ಅಶೋಕ್‌ಕುಮಾರ್ ರೈ ಅವರು ತಿಳಿಸಿದ್ದಾರೆ.

ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಭಾವಚಿತ್ರ ಇರುವ ಬ್ಯಾನರ್‌ ಅಳವಡಿಸಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸುತ್ತಲಿನ ಸಿ.ಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಶಾಸಕ ಅಶೋಕ್‌ಕುಮಾರ್ ರೈ ಕೋಡಿಂಬಾಡಿ ಆಗ್ರಹಿಸಿದ್ದಾರೆ.

ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸರು, ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಅದನ್ನು ಖಂಡಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸಿಗೆ ಮತದಾರರು ನೀಡಿರುವ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದ್ದೇ ಸರ್ಕಾರ ಇರುವಾಗಲೂ ಪ್ರತಿಭಟನೆ ಮಾಡಿದ್ದರು. ಈಗಲೂ ಮಾಡುತ್ತಲೇ ಇದ್ದಾರೆ ಎಂದು ಅವರು ಟೀಕಿಸಿದ್ದಾರೆ.

 

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago