ಪುತ್ತೂರು : ಬೈಕ್‍ ಗೆ ಜೀಪು ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು ; ಇಬ್ಬರು ಗಂಭೀರ.. Vishwanews24

ಪುತ್ತೂರು : ಬೈಕ್‍ ಗೆ ಜೀಪು ಡಿಕ್ಕಿ-  ಸವಾರ ಸ್ಥಳದಲ್ಲೇ ಮೃತ್ಯು ; ಇಬ್ಬರು ಗಂಭೀರ..

ಪುತ್ತೂರು: ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.

ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago