ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…