ಪುತ್ತೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…