ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
ಆಗಸ್ಟ್ 26 ರಂದು ನಡೆದ ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಸ್ವಾತಂತ್ರ್ಯದ ಅಮೃತ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ.
ಬ್ರಿಟಿಷರ ಮುಂದೆ ಕ್ಷಮಾಪಣೆ ಕೇಳಿದ,ಗಾಂಧೀಜಿಯವರನ್ನು ಕೊಂದ ಈ ಮಂದಿಗೆ ಸ್ವಾತಂತ್ರ್ಯದ ಇತಿಹಾಸವೇ ತಿಳಿದಿಲ್ಲ. ಸ್ವಾತಂತ್ರ್ಯದ ಇತಿಹಾಸವನ್ನು ತಿರುಚುವ ಪ್ರಯತ್ನದಲ್ಲಿ ಈ ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಮೇಲೆ ಮೊಟ್ಟೆ ಎಸೆಯುವ ಮೂಲಕ ಅವಮಾನ ಮಾಡುವ ಕೃತ್ಯದಲ್ಲಿ ಇಂಥ ವ್ಯಕ್ತಿಗಳು ತೊಡಗಿಕೊಂಡಿದ್ದಾರೆ.
ಮಡಿಕೇರಿಯ ಜನರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ಜನವರಿ 26 ರಂದು ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಗೆ ತೆರಳಿ ಹೋರಾಟ ನಡೆಸುವ ಮೂಲಕ ಅಲ್ಲಿನ ಜನರಿಗೆ ಸ್ವಾತಂತ್ರ್ಯ ನೀಡಬೇಕು ಎಂದರು.
ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ – Vishwanews24
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…