ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.
ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಯಾವುದೇ ಗಾಯ-ಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಬಳಿಕ ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಲಾಯಿತು ತಿಳಿದುಬಂದಿದೆ.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…