Featured

ಪುತ್ತೂರು: ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್ – Vishwanews24

ಪುತ್ತೂರು: ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ.

ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ,ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ.ಅವ ಆದೇಶ ಮಾಡಿದ್ದರು.ಈ ಆದೇಶ ಪ್ರಶ್ನಿಸಿ ಭರತ್ ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.

ಬಂಟ್ವಾಳ ತಾಲೂಕು ಪುದು ಗ್ರಾಮದ ಭರತ್ ಕುಮ್ಡೇಲು ಬಜರಂಗದಳ ಜಿಲ್ಲಾ ಸಂಯೋಜಕರಾಗಿದ್ದಾರೆ. ಭರತ್ ಕುಮ್ಡೇಲು ರವರು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಇರುವ ವ್ಯಕ್ತಿಯಾಗಿದ್ದು ವೆಹಿಕಲ್ ಸೀಝರ್ ಕೆಲಸವನ್ನು ಮಾಡಿಕೊಂಡಿರುತ್ತಾರೆ. ಈತ ಬಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿಕೊಂಡು ಪರಂಗಿಪೇಟೆ,ಕಡೆಗೋಳಿ,ಬಿಸಿರೋಡ್ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ,ಕೊಲೆಯತ್ನ,ದೊಂಬಿ,ಹಲ್ಲೆ,ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿ ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವಂತಹ ಪ್ರವೃತ್ತಿಯವರಾಗಿರುತ್ತಾರೆ.

ಈತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಇತರ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ,ದೊಂಬಿ,ಹಲ್ಲೆ ಇತ್ಯಾದಿ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕಾನೂನು ಬಾಹಿರ ಕೃತ್ಯಗಳಿಗೆ ಪ್ರಚೋದನೆ ನೀಡುವವನಾಗಿರುವುದರಿಂದ ಪೊಲೀಸ್ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)ಮತ್ತು 55(ಬಿ) ಅಡಿಯಲ್ಲಿ ಭರತತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ,ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು.ಈ ಆದೇಶವನ್ನು ಪ್ರಶ್ನಿಸಿ ಭರತ್ ಕುಮ್ಡೇಲು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.ಭರತ್ ಕುಮ್ಡೇಲು ಅವರ ಪರ ಹಿರಿಯ ನ್ಯಾಯವಾದಿ ಅರುಣ್‌ಶ್ಯಾಮ್ ವಾದಿಸಿದ್ದರು. ನ್ಯಾಯವಾದಿ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago