Featured

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು  – vishwanews24

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ (21) ಆರೋಪಿ ಯುವಕ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಯುವಕ ಹಾಗೂ ಯುವತಿ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯನ್ನು ಮನೆಗೆ ಕರೆತಂದು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದಾನೆ.

ಪೊಲೀಸರಿಗೆ ದೂರು ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದು, ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಯುವತಿ ಗರ್ಭವತಿಯಾಗಿದ್ದು, ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು ಎಂದು ಯುವತಿ ತಿಳಿಸಿದ್ದಾಳೆ. ಆದರೆ, ಈಗ ಯುವತಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರಂತೆ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

5 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

5 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

5 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

5 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

6 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

6 hours ago