ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದು, ಈತ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಇನ್ನು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…