ದಕ್ಷಿಣ ಕನ್ನಡ

ಪುತ್ತೂರು: ಮೋರಿಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು; ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರು – vishwanews24

ಪುತ್ತೂರು: ಮೋರಿಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು; ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರು
ಪುತ್ತೂರು : ನಿಯಂತ್ರಣ ತಪ್ಪಿ ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಕಾರೊಂದು ಬೆಂಕಿ ಹೊತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಸ್ತುತ ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ವೇಳೆ ಹೊಸ ಹೆದ್ದಾರಿ ಕಾಮಗಾರಿಗಾಗಿ ನಿರ್ಮಿಸಲಾಗುತ್ತಿದ್ದ ಮೋರಿಗೆ ಕಾರು ಢಿಕ್ಕಿ ಹೊಡೆದಿದೆ.

ಢಿಕ್ಕಿ ಸಂಭವಿಸಿದ ತಕ್ಷಣ ಕಾರಿನ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ವ್ಯಾಪಿಸಿದೆ. ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಕೂಡಲೇ ವಾಹನದಿಂದ ಹೊರಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪುತ್ತೂರಿನಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದಾಗಲೇ ಕಾರಿನ ಮುಂಭಾಗವು ಬೆಂಕಿಯಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ.

Vishwa News 24

Recent Posts

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

35 minutes ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

44 minutes ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

51 minutes ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

57 minutes ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 hour ago

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ – VISHWAEWS24

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್.…

2 hours ago