ಪುತ್ತೂರು : ದೇಶದಲ್ಲಿ ಇಂದು ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ನಡೆಸುತ್ತಾರೆ, ನಾನು ಹಿಂದೂ ಆದರೆ ನನಗೆ ಹಿಂದುತ್ವ ಬೇಕಿಲ್ಲ ಎನ್ನುವ ಕಮಂಗಿಗಳಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗ್ಡೆ ಹೇಳಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಾಜಿ ಸಿಎಂ ಸಿದ್ಧರಾಮಯ್ಯರ ವಿರುದ್ಧ ಪರೋಕ್ಷ ದಾಳಿ ನಡೆಸಿದ ಅವರು ಹಿಂದುತ್ವದ ಬಗ್ಗೆ ಮಾತನಾಡುವ ಆ ಮನುಷ್ಯನಿಗೆ ಅವನ ರಕ್ತದ ಬಗ್ಗೆಯೇ ಗೊತ್ತಿಲ್ಲ. ಅಂತವ ಹಿಂದುತ್ವವೇ ಬೇಡ ಎನ್ನುವ ಮಾತನಾಡುತ್ತಾನೆ. ನಿನಗೆ ಬೇಕೋ,ಬೇಡವೋ ಎನ್ನುವುದನ್ನು ಯಾರು ಕೇಳಿದ್ದಾರೆ. ನಿನಗೆ ಹಿಂದುತ್ವ ಇಲ್ಲ ಅನ್ನೋದನ್ನ ನಾವೆಲ್ಲಾ ಪರಿಗಣಿಸಿ ಬಿಟ್ಟಾಗಿದೆ. ಅಂಥವರಿಂದ ನಮಗೆ ಹಿಂದುತ್ವದ ಪಾಠ ಬೇಕಾಗಿಲ್ಲ ಎಂದ ಅವರು ಜಾತಿಯ ಗೂಡನ್ನು ಬಿಟ್ಡು ಹೊರಗೆ ಬರದವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ, ಸರಿಯಾಗಿ ಎರಡು ಪುಸ್ತಕವಿಟ್ಟರೆ ಅದನ್ನ ಓದುವ ಯೋಗ್ಯತೆ ಇಲ್ಲದವರು ಹಿಂದುತ್ವದ ಮಾತನಾಡುತ್ತಾರೆ.
ದೇವಸ್ಥಾನಕ್ಕೆ ಹೇಗೆ ಹೋಗಬೇಕು ಎನ್ನುವ ಪರಿಜ್ಞಾನವಿಲ್ಲದವರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.ಯಾರಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲವೋ ಅಂತವರು ಹಿಂದೂ ಆಗಿರಲು ಸಾಧ್ಯವಿಲ್ಲ. ವಿವೇಕಾನಂದರು ಹಿಂದುತ್ವದ ಇದೇ ಭವ್ಯ ಬದುಕಿನಲ್ಲಿ ನಡೆದವರು ಎಂದರು.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…