Featured

ಪುತ್ತೂರು : ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ – ಡಿವೈಎಸ್ಪಿ ಗೆ ಜಾಮೀನು – Vishwanews24

ಪುತ್ತೂರು : ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ – ಡಿವೈಎಸ್ಪಿ ಗೆ ಜಾಮೀನು

ಪುತ್ತೂರು: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್‌ ಕುಮಾರ್‌ ಕಟೀಲ್‌ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್‌ ರೆಡ್ಡಿ ಹಾಗೂ ಕಾನ್‌ಸ್ಟೆಬಲ್‌ ಹರ್ಷಿತ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್‌ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್‌ ಅವರ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಅವರು ಜೂ.16ರಂದು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago