ಪುತ್ತೂರು: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಹರ್ಷಿತ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್ ಅವರ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಅವರು ಜೂ.16ರಂದು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …