Featured

ಪುತ್ತೂರು ಯುವತಿಗೆ ವಂಚನೆ ಪ್ರಕರಣ : ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ : ಪ್ರತಿಭಾ ಕುಳಾಯಿ ಎಚ್ಚರಿಕೆ – vishwanews24

ಪುತ್ತೂರು ‘ಲವ್–ಸೆಕ್ಸ್–ಧೋಖಾ’ಪ್ರಕರಣ : ಜ 31ರೊಳಗೆ ಮದುವೆ ನಡೆಯದಿದ್ದರೆ ಫೆ. 7ರಂದು ನಾಮಕರಣ – ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ ಮಧು ಆಚಾರ್ಯ ಎಂಬವರು ಕರೆ ಮಾಡಿ ಕೃಷ್ಣ ಜೆ.ರಾವ್ ಅವರ ಕುಟುಂಬ ಮದುವೆಗೆ ಒಪ್ಪಿರುವುದಾಗಿ ತಿಳಿಸಿ, ಸ್ವಲ್ಪ ಕಾಲಾವಕಾಶ ಕೇಳಿದ್ದಲ್ಲದೆ ತೊಟ್ಟಿಲು ಹಾಕುವ ಕಾರ್ಯಕ್ರಮ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿ ನಾಮಕರಣದ ದಿನ ಬದಲಾಯಿಸಲಾಗಿದೆ. ಹಿಂದೆಯೂ ಆರು ತಿಂಗಳು ನಮ್ಮನ್ನು ದಾರಿ ತಪ್ಪಿಸಲಾಗಿದ್ದು ಈ ಬಾರಿ ಹಾಗಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಧಾನಕ್ಕೆ ನಮಿತಾ ಮತ್ತು ಆಕೆಯ ಮಗಳು ಮಾತ್ರ ಬರಬೇಕು ಎಂಬ ಷರತ್ತನ್ನು ವಿಧಿಸಿದ್ದು, ನಾವದನ್ನು ಒಪ್ಪುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಯಾಕೆಂದರೆ ಅವರಲ್ಲಿಗೆ ಹೋದರೆ ಏನು ಬೇಕಾದರೂ ಆಗಬಹುದೆನ್ನುವ ಭಯವಿದೆ. ಆದರೂ ಸಂಧಾನಕ್ಕೆ ನಾನು ಹಾಗೂ ನಂಜುಂಡಿ ಹೋಗುವುದಿಲ್ಲ. ಸಂಧಾನ ಪುತ್ತೂರು ಪೊಲೀಸ್ ಠಾಣೆಯಲ್ಲೇ ಆಗಲಿ ಅಥವಾ ಮಂಗಳೂರು ಎಸ್ಪಿ ಅವರ ಬಳಿ ನಡೆಯಲಿ ಎಂದು ಪ್ರತಿಭಾ ಬೇಡಿಕೆ ಮುಂದಿಟ್ಟಿದ್ದಾರೆ.

ಕೃಷ್ಣ ಜೆ.ರಾವ್ ಕುಟುಂಬ ಮದುವೆಗೆ ಒಪ್ಪುವುದಿಲ್ಲ ಎಂದು ಪುತ್ತೂರು ಶಾಸಕರೂ ಹೇಳಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು ಕೇಸಿನಿಂದ ಹೊರಬರಲು ನಾಟಕ ನಡೆಯುತ್ತಿರುವ ಶಂಕೆ ಇದೆ. ಹಿಂದೆಯೂ ಮಗುವನ್ನು ಆಶ್ರಮಕ್ಕೆ ನೀಡಬೇಕು, ಕೇಸು ಹಿಂದಕ್ಕೆ ಪಡೆಯಬೇಕು, ಮದುವೆಯ ನಂತರ ವಿಚ್ಛೇದನ ಪಡೆಯುವಂತೆ ಬೇಡಿಕೆ ಇಟ್ಟಿದ್ದರು ಎಂದು ಪ್ರತಿಭಾ ಆರೋಪಿಸಿದರು.

ಮದುವೆ ಕಾನೂನುಬದ್ಧವಾಗಿ ಆನ್ ಲೈನ್ ಅಥವಾ ಯಾವುದೇ ರೀತಿಯಲ್ಲಾದರೂ ಆಗಲಿ. ಯಾವುದೇ ರೀತಿಯಲ್ಲಾದರೂ ಈ ಪ್ರಕರಣ ಅಂತ್ಯವಾಗಬೇಕು, ಇಬ್ಬರ ತಪ್ಪಿಗೂ ಪ್ರಾಯಶ್ಚಿತವಾಗಬೇಕು. ಮದುವೆಯಾಗಿ ಒಂದಾಗದಿದ್ದರೆ ಕಾನೂನು ಪ್ರಕಾರ ವಿಚ್ಛೇದನ ಪಡೆಯಲಿ. ಯಾವುದೇ ಗೋಷ್ಠಿ ಅಥವಾ ಸಭೆಗಳಿಗೆ ಹೋಗಬಾರದೆಂದು ಷರತ್ತು ವಿಧಿಸಿದ್ದರಿಂದ ನಮಿತಾ ಭಾಗವಹಿಸಿಲ್ಲ.

ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ, ಫೆ.7ರಂದು ಅದ್ಧೂರಿಯಾಗಿ ಮಗುವಿನ ನಾಮಕರಣ ನಡೆಯಲಿದೆ. ಜೊತೆಗೆ ಕಾನೂನಾತ್ಮಕ ಹೋರಾಟ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago