ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22 ವರ್ಷ) ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.
ಆಂಬುಲೆನ್ಸ್ ಸಾಗುವ ಮಾರ್ಗ:
ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ – ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆ – ಚಾರ್ಮಾಡಿ – ಬಂಕಲ್ ಹ್ಯಾಂಡ್ ಪೋಸ್ಟ್ – ಗೋಣಿಬೀಡು – ಬೇಲೂರು – ಹಾಸನ – ಯಶವಂತುರ – ಹೆಬ್ಬಾಳ – ರಾಮಮೂರ್ತಿನಗರ – ಟಿನ್ ಫ್ಯಾಕ್ಟರಿ – ಮಹದೇವಪುರ – ವೈದೇಹಿ ಆಸ್ಪತ್ರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…