Featured

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – vishwanews24

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು.

ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ ಒಳರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಪುತ್ತೂರಿನಿಂದ ಮಂಗಳೂರಿನತ್ತ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಅಪೂರ್ವ ಅವರ ತಂದೆ ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ನುಜ್ಜುಗುಜ್ಜಾಗಿತ್ತು.

ಅಪಘಾತದಲ್ಲಿ ಅಪೂರ್ವ, ಅವರ ತಂದೆ ಈಶ್ವ‌ರ್ ಭಟ್ ಮತ್ತು ಅಪೂರ್ವ ಅವರ ಪುಟ್ಟ ಮಗಳು ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದರು. ಅಪೂರ್ವ ಅವರ ಸ್ಥಿತಿ ಗಂಭೀರವಾಗಿತ್ತು. 134 ದಿನಗಳ ಕಾಲ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago