ಪುತ್ತೂರು: ರಾಷ್ಟ್ರ ಮಟ್ಟದ ಮಾಜಿ ವೈಟ್ ಲಿಪ್ಟಿಂಗ್ ಆಟಗಾರ ರಾಜೇಂದ್ರ ಪ್ರಸಾದ್ ಹೃದಯಾಘಾತದಿಂದ ನಿಧನ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ರಾಷ್ಟ್ರ ಮಟ್ಟದ ಮಾಜಿ ವೈಟ್ ಲಿಪ್ಟಿಂಗ್ ಆಟಗಾರ ರಾಜೇಂದ್ರ ಪ್ರಸಾದ್ ಹೃದಯಾಘಾತದಿಂದ ನಿಧನ

ಪುತ್ತೂರು:  ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42ವ.) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ ಮೊದಲೇ ಸಾವನ್ನಪ್ಪಿದ್ದಾರೆ.

ಉಚ್ಚಿಲ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ: 7 ಮಂದಿ ಮೀನುಗಾರರ ರಕ್ಷಣೆ – Vishwanews24

ಇನ್ನು ಮೃತ ರಾಜೇಂದ್ರ ಪ್ರಸಾದ್ ರವರು ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ರವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ(2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ರವರ ಶಿಷ್ಯರಾಗಿದ್ದರು ಎನ್ನಲಾಗಿದೆ.

ಮೃತ ರಾಜೇಂದ್ರ ಪ್ರಸಾದ್ ರವರು ತಂದೆ ರಾಮಕೃಷ್ಣ, ತಾಯಿ ಇಂದಿರಾವತಿ, ಪತ್ನಿ ಬಂಟ್ವಾಳ ಬಿಇಒ ಕಛೇರಿಯಲ್ಲಿ ಕ್ಲರ್ಕ್ ಆಗಿರುವ ಪ್ರತಿಮಾ, ಪುತ್ರಿಯರಾದ ಸಮನ್ವಿ, ಮಾನ್ವಿ, ಸಹೋದರಿ ಐಶ್ವರ್ಯರವರನ್ನು ಅಗಲಿದ್ದಾರೆ.

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ – Vishwanews24

Leave a Reply