ಪುತ್ತೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42ವ.) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ ಮೊದಲೇ ಸಾವನ್ನಪ್ಪಿದ್ದಾರೆ.
ಇನ್ನು ಮೃತ ರಾಜೇಂದ್ರ ಪ್ರಸಾದ್ ರವರು ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ರವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ(2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ರವರ ಶಿಷ್ಯರಾಗಿದ್ದರು ಎನ್ನಲಾಗಿದೆ.
ಮೃತ ರಾಜೇಂದ್ರ ಪ್ರಸಾದ್ ರವರು ತಂದೆ ರಾಮಕೃಷ್ಣ, ತಾಯಿ ಇಂದಿರಾವತಿ, ಪತ್ನಿ ಬಂಟ್ವಾಳ ಬಿಇಒ ಕಛೇರಿಯಲ್ಲಿ ಕ್ಲರ್ಕ್ ಆಗಿರುವ ಪ್ರತಿಮಾ, ಪುತ್ರಿಯರಾದ ಸಮನ್ವಿ, ಮಾನ್ವಿ, ಸಹೋದರಿ ಐಶ್ವರ್ಯರವರನ್ನು ಅಗಲಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…