ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಸೋಮವಾರ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಮಹಿಳೆಯೊಬ್ಬರು ಪುತ್ತಿಲ ಅವರ ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರುಣ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಪುತ್ತಿಲ ಅವರು ತಮ್ಮ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಇಂದು ನ್ಯಾಯಾಲಯಕ್ಕೆ ತೆರಳಿ ಜಾಮೀನು ಪಡೆದುಕೊಂಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದಿದ್ದಾರೆ.
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…