ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಮದುವೆ ಭರವಸೆ ನೀಡಿ ಯುವತಿಯನ್ನು ಆರೋಪಿ ವಂಚಿಸಿದ್ದ. ಯುವತಿ ಗರ್ಭಿಣಿಯಾದ ಬಳಿಕ ಕೃಷ್ಣ ಜೆ. ರಾವ್ ಕೈಕೊಟ್ಟಿದ್ದ. ಯುವತಿ ಮಗುವಿಗೆ ಜನ್ಮ ನೀಡಿದರೂ ಮದುವೆಯಾಗಲು ನಿರಾಕರಿಸಿದ್ದ.
ಬಳಿಕ ಬಂಧನಕ್ಕೊಳಗಾಗಿ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಂತ್ರಸ್ತೆ ಹಾಗೂ ಮಗುವಿಗೆ ತಿಂಗಳಿಗೆ 75,000 ರೂಪಾಯಿ ಜೀವನಾಂಶ ನೀಡಲು ಕೋರ್ಟ್ ಆದೇಶ ಹೊರಡಿಸಿದೆ.
ಒಂದು ವಾರದೊಳಗೆ ಮೊದಲ ಕಂತು ಪಾವತಿಸಲು ಕೋರ್ಟ್ ಸೂಚನೆ ನೀಡಿದೆ. ಮುಂದಿನ ಎಲ್ಲಾ ನ್ಯಾಯಾಂಗ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನರ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…