ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರ ರಾತ್ರಿ ಸಂಭವಿಸಿದೆ.
ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.
ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ.
ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯಲ್ಲಿ ಊರಿಗೆಬಂದಿದ್ದರು. ಅವರು ತಂದೆ ತಾಯಿ, ತಂಗಿಯನ್ನು ಅಗಲಿದ್ದಾರೆ.
ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ : ಪರಮೇಶ್ವರ್ ಬೆಂಗಳೂರು: ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದು ಡಿಸಿಎಂ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ಭಾರೀ ವಾಹನಗಳ ಅತಿವೇಗದ ಸಂಚಾರ ; ವಾಹನ ಸವಾರರು, ಪಾದಚಾರಿಗಳಲ್ಲಿ ಆತಂಕ ಮಂಗಳೂರು:…
ಬೆಳ್ತಂಗಡಿ : ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ; ಇಬ್ಬರು ಯುವಕರು ಸಾವು ಬೆಳ್ತಂಗಡಿ: ಚರ್ಚ್ ರೋಡ್‌ನಲ್ಲಿ ಗೂಡ್ಸ್…
ಹಾಸನ: ಸಿದ್ದರಾಮಯ್ಯ–ಡಿಕೆಶಿ ನಡುವೆ ವೈಮನಸ್ಸು ಸೃಷ್ಟಿಸಲು ಯಾರಿಂದಲೂ ಸಾಧ್ಯವಿಲ್ಲ ; ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ : ಯು.ಟಿ. ಖಾದರ್…
ಯಾರೂ ಗಾಬರಿ ಪಡಬೇಕಿಲ್ಲ, ರೈತರ ಖಾತೆಗೆ ಹಣ ಹಾಕ್ತೀವಿ: ಸಿಎಂ ಸ್ಪಷ್ಟನೆ ಬೆಂಗಳೂರು: ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಕಡಿಮೆ…
ನ.13ರಂದು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಉಡುಪಿ: ರಾಜ್ಯದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ,…