ಪುತ್ತೂರು : ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆಯಾಗಿದ್ದಾಳೆ. ಪುತ್ತೂರಿನ ಬೆಟ್ಟಂಪಾಡಿಯ ಗುಮ್ಮಟಗದ್ದೆಯ ಬಾಲಕೃಷ್ಣ ಅವರು ಪುತ್ರಿ ಪುಣ್ಯಶ್ರೀಯವರನ್ನು 2017ರ ಜನವರಿ 1ಕ್ಕೆ ಬೆಳ್ತಂಗಡಿಯ ಪುರುಷೋತ್ತಮ ಅವರಿಗೆ ವಿವಾಹ ಮಾಡಿಕೊಟ್ಟಿದ್ದರು. ಪುರುಷೋತ್ತಮ ಮತ್ತು ಪುಣ್ಯಶ್ರಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಪುಣ್ಯಶ್ರೀ ಅವರು ಕಳೆದ ಎಪ್ರಿಲ್ 4ರಂದು ತವರು ಮನೆಗೆ ಬಂದಿದ್ದರು.
ಎಪ್ರಿಲ್ 10ರಂದು ಅವರು ಪತಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ರಾತ್ರಿ ವೇಳೆ ಚಿಕ್ಕಮ್ಮ ಲತಾ ಅವರ ಮೊಬೈಲ್‌ಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿ ಬಾವಿಗೆ ಹಾರಿದ್ದರು. ಪುಣ್ಯಶ್ರೀಯವರನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಪ್ಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…