ಪುತ್ತೂರು : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ” ಡ್ರೀಮ್ಸ್ – ಕನಸುಗಳು ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ತಮ್ಮ ವಿದ್ಯಾರ್ಥಿ ಜೀವನದ ಮಹತ್ವದ ಗಟ್ಟವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ನಂತರದ ಶಿಕ್ಷದ ಆಯ್ಕೆಯ ಬಗ್ಗೆ ಮತ್ತು ತಮ್ಮ ಬದುಕನ್ನು ಶೈಕ್ಷಣಿಕವಾಗಿ ರೂಪಿಸೂದರ ಕುರಿತು ವಿದ್ಯಾರ್ಥಿಗಳಿಗಿರುವ ಗೊಂದಲ ಮತ್ತು ಹೆತ್ತವರಿಗಿರು ಗೊಂದಲ ಬಗೆಹರಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿಯು ಕಹಳೆ ನ್ಯೂಸ್ ಗೆ ತಿಳಿಸಿದ್ದು, ಕಾರ್ಯಕ್ರಮದಲ್ಲಿ ಮಾಜಿ ಐ.ಪಿ.ಎಸ್ ಅಣ್ಣಾಮಲೈ ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸುತ್ತಿದ್ದೇವೆ ಎಂದು ತಿಳಿಸಿದರು.
ನವೆಂಬರ್ 16 ರಂದು ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಗಣ್ಯರೂ ಅಣ್ಣಾಮಲೈ ಅವರ ಜೊತೆಗೆ ಪಾಲುಪಡೆಯಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿಯು ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…