ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ನಿಧನ – vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ನಿಧನ

ಪುತ್ತೂರು: ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Leave a Reply