ಪುತ್ತೂರು, : ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ರ ಪುತ್ರಿ ವಂಶಿ ಬಿ.ಕೆ (17ವ) ಎಂದು ಗುರುತಿಸಲಾಗಿದೆ.
ಈಕೆ ಈಗಷ್ಟೇ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ವ್ಯಾಸಂಗ ಮಾಡಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು. ಮೃತ ವಂಶಿ ಬಿ.ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರು. ವಿದ್ಯಾಭಾರತಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇತ್ತೀಚೆಗೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯನ್ನು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಬಳಿಕ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ತೀವ್ರ ಅಸ್ವಸ್ಥರಾಗಿದ್ದರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…