ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ. ಇಲ್ಲಿ ಈ ಹಿಂದೆ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳ ಜೊತೆಗೆ ಪಕ್ಷದ ಸಂಘಟನೆಯ ಕೆಲಸವನ್ನೂ ಮಾಡಿದ್ದಾರೆ. ಈ ಭಾರಿ ಅವರಿಗೆ ಮತ್ತೆ ಸ್ಪರ್ಧಿಸಲು ಪಕ್ಷವು ಅವಕಾಶ ನೀಡಬೇಕು.
ಅವಕಾಶ ನಿರಾಕರಿಸಿದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್‍ನ ಎಲ್ಲಾ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲಿದ್ದೇವೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಎಚ್ಚರಿಕೆ ನೀಡಿದ್ದಾರೆ.
ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಈ ಹಿಂದೆಯೇ ಪಕ್ಷದ ಹೈಕಮಾಂಡ್‍ಗೆ ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ನೀಡುವಂತೆ ಮಾದ್ಯಮಗಳ ಮೂಲಕ ಮನವಿ ಮಾಡಿದ್ದೆವು. ಆದರೆ ಇದೀಗ ಪಕ್ಷವು ಬೇರೆಯವರಿಗೆ ಟಿಕೇಟ್ ನೀಡುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಶಕುಂತಳಾ ಶೆಟ್ಟಿ ಅವರು ಬಲಿಷ್ಠಗೊಳಿಸಿದ್ದಾರೆ. ಮಹಿಳೆಯರ ಏಳಿಗೆಗಾಗಿ ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಪಕ್ಷವು ಮಹಿಳೆಯರ ಕಡೆಗಣನೆ ಮಾಡುತ್ತಿರುವ ಸೂಚನೆ ಕಂಡು ಬರುತ್ತಿದೆ. ಅನುಭವಿ ರಾಜಕಾರಣಿಯಾಗಿರುವ ಶಕುಂತಳಾ ಶೆಟ್ಟಿ ಅವರು ಕೊನೆಯ ಬಾರಿಯಾಗಿ ಈ ಬಾರಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ವಿಶಾಲಾಕ್ಷಿ ಬನ್ನೂರು, ವಿಲ್ಮಾ ಗೋನ್ಸಾಲ್ವಿಸ್, ಸುಧಾ ಕುಂಜತ್ತಾಯ ಮತ್ತು ಸೀತಾ ಭಟ್ ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…