ಪುತ್ತೂರು: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಈ ಫೋಟೋಗಳು ವೈರಲ್ ಆಗಿದ್ದು,ಈ ಫೋಟೋವಿಗೂ, ಶಾಸಕರಿಗೂ ಇರುವ ಸಂಬಂಧವೇನು ಅನ್ನೋದನ್ನು ಶಾಸಕರು ಜನರಿಗೆ ತಳಿಸಬೇಕು.
ಮಾತೆತ್ತಿದರೆ ಮಹಿಳೆಯರನ್ನು ಮಾತೆ ಎನ್ನುವ ಬಿಜೆಪಿಗರ ಹಣೆಬರಹ ಎಂ.ಪಿ.ರೇಣುಕಾಚಾರ್ಯರಿಂದ ಹಿಡಿದು ಪುತ್ತೂರು ಶಾಸಕರ ವರೆಗಿನ ಫೋಟೋ ತನಕ ಬೀದಿಗೆ ಬಂದಿದೆ. ಈ ಫೋಟೋದ ಸತ್ಯಾಸತ್ಯತೆಯನ್ನು ಪೋಲೀಸರು ತನಿಖೆಯಲ್ಲಿ ಬಹಿರಂಗಪಡಿಸಬೇಕು.
ಶಾಸಕರೇ ತಮ್ಮ ಆಪ್ತರಲ್ಲಿ ಹೇಳಿಕೊಂಡಂತೆ ಈ ಫೋಟೋಗಳನ್ನು ಬಿಜೆಪಿಯಲ್ಲಿರುವ ಅವರ ರಾಜಕೀಯ ವಿರೋಧಿಗಳೇ ಮಾಡಿದ್ದು, ಓರ್ವ ಮಹಿಳೆಯನ್ನು ಅವಮಾನ ಮಾಡಿದ ಇಂಥಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…