ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಮಹಿಳೆಯ ಹೊಟ್ಟೆಯೊಳಗೆ ಬ್ಯಾಂಡೆಜಿನ ಬಟ್ಟೆಯ ತುಂಡನ್ನು ಗರ್ಭಿಣಿ ಮಹಿಳೆಯ ಉದರದಲ್ಲೇ ಬಿಟ್ಟು ಹೊಲಿಗೆ ಹಾಕಿದ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಲು ಆರು ಅಧಿಕಾರಿಗಳು ಮತ್ತು ವೈದ್ಯರ ತಂಡ ಫೆ.24ರಂದು ಪುತ್ತೂರಿಗೆ ಭೇಟಿ ನೀಡಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು. ಒಂದು ವಾರದಲ್ಲಿ ವಿಚಾರಣೆ ನಡೆಸಿ ಅಗತ್ಯ ಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಲಿದೆ.
ಘಟನೆ ನಡೆದ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ವಿಚಾರಿಸಿದೆವು.ಆಸ್ಪತ್ರೆಯಿಂದಲೂ ಮಾಹಿತಿ ಸಂಗ್ರಹಿಸಿದೆವು. ಹೆಚ್ಚುವರಿಯಾಗಿ ಮತ್ತೊಂದು ಆಸ್ಪತ್ರೆಗೆ ಭೇಟಿ ನೀಡಿ ಸ್ಕ್ಯಾನ್ ಪತ್ತೆ ಹಚ್ಚಿದ ಬಳಿಕ ಗೋಜಲು ತೆಗೆದಿದ್ದು, ಮಂಗಳವಾರವೂ ತನಿಖೆ ಮುಂದುವರಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಪತ್ರಿಕೆಗೆ ತಿಳಿಸಿದ್ದಾರೆ.
ಕಳೆದ ವರ್ಷ ನವೆಂಬರ್ 27 ರಂದು ಗಗನ್‌ದೀಪ್ ಅವರ ಪತ್ನಿ ಶರಣ್ಯ ಲಕ್ಷ್ಮಿ ಹೆರಿಗೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ನಡೆಸಿದ ಆಫರೇಷನ್ ಸಂದರ್ಭದಲ್ಲಿ ಬ್ಯಾಂಡೇಜಿನ ಬಟ್ಟೆ ಹೊಟ್ಟೆಯಲ್ಲೇ ಉಳಿದುಕೊಂಡಿತ್ತು. ಡಿ. 2ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಕೆಲವು ದಿನಗಳಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಈ ಸಂಬಂಧ ಸ್ಕ್ಯಾ ನ್ ಮಾಡಿದಾಗ ಬಟ್ಟೆ ಹೊಟ್ಟೆಯಲ್ಲೇ ಉಳಿದುಕೊಂಡಿರುವುದು ಬೆಳಕಿಗೆ ಬಂದಿತ್ತು. ಬೇರೊಂದು ಆಸ್ಪತ್ರೆಯಲ್ಲಿ ಅದನ್ನು ಹೊರ ತೆಗೆಯಲಾಯಿತು ಎಂದು ಶರಣ್ಯ ಅವರ ಪತಿ ಗಗನ್‌ದೀಪ್ ಆರೋಪಿಸಿದ್ದರು.
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…