Featured

ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ಇಂದಿನಿಂದ ಡಿ. 17ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ – Vishwanews24

ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ಇಂದಿನಿಂದ ಡಿ. 17ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ – Vishwanews24

ಪುತ್ತೂರು : ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ.

ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪವಿಭಾಗಾಯಾದ್ಯಂತ ಅಂದರೆ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

ಏನಿದೆ ಆದೇಶದಲ್ಲಿ ?

ಈ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇದಿಸಿದೆ.

ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.

ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ಥಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.

ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 152/2021 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಸೀನಾನ್ ಎಂಬಾತನನ್ನು ಉಪ್ಪಿನಂಗಡಿ ಎಸ್ ಐ ಕುಮಾರ್ ಕಾಂಬ್ಲೆ ಇವರು ಡಿ 13 ರಂದು ರಾತ್ರಿ ಬಂಧಿಸಿದ್ದರು. ಇದನ್ನು ವಿರೋಧಿಸಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ತಾಲೂಕಿನಾದ್ಯಂತದ, ಕಡಬ ತಾಲೂಕು ವ್ಯಾಪ್ತಿಯಾದ್ಯಂತದ ಬೆಳ್ಳಾರೆ,ಸವಣೂರು, ಬೆಳ್ತಂಗಡಿ, ಬಂಟ್ವಾಳ ,ಸುಳ್ಯ ತಾಲೂಕು ವ್ಯಾಪ್ತಿಯ ಹಲವಾರು ಪಿಎಫ್‌ಐ ಸಂಘಟನೆಯ ಕಾರ್ಯಕರ್ತರುಗಳು ಉಪ್ಪಿನಂಗಡಿ ಠಾಣೆಯ ಮುಂಭಾಗ ಅಕ್ರಮಕೂಟ ಸೇರಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಸನ್ನಿವೇಶ ಸೃಷ್ಟಿಸಿದ್ದಾರೆ.

ಅಲ್ಲದೇ ಪಿಎಫ್ ಐ ಸಂಘಟನೆಯವರು ಠಾಣೆಯ ಒಳಗಡೆ ಧಾವಿಸಲು ಪ್ರಯತ್ನಿಸುತ್ತಾ ವಿಚಾರಣೆಗೆ ಕರೆತಂದವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಉದ್ರೇಕಕಾರಿ ವರ್ತನೆ ತೋರಿದ್ದಾರೆ ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

56 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago