ಪುತ್ತೂರು: ಬಿಜೆಪಿ ನಾಯಕರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.
ಬ್ಯಾನರ್’ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ ಎಂದು ಈಗಾಗಲೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮತ್ತೊಂದೆಡೆ ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆಸ್ಸಿನವರೇ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಿಸಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಆರೋಪಕ್ಕೆ ಖಾರವಾಗಿಯೇ ಶಾಸಕ ಅಶೋಕ್ ರೈ ಉತ್ತರಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಕರಣದ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ ಅದರಂತೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದರು.
ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮತನಾಡುವ ಅಗತ್ಯವಿಲ್ಲ. ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಹೇಳಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …